ನವದೆಹಲಿ: ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಅಸ್ಸಾಂ, ಕೇರಳ ಮತ್ತು ತಮಿಳುನಾಡಿನಲ್ಲಿ ಈ ಬಾರಿ ಜನತೆ ಬದಲಾವಣೆಗಾಗಿ ಮತದಾನ ಮಾಡಿರುವ ಲಕ್ಷಣಗಳು ಗೋಚರಿಸುತ್ತಿದೆ.
ಇದೇ ಮೊದಲ ಬಾರಿಗೆ ಅಸ್ಸಾಂನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು 15 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಕೊನೆಗಾಣಿಸಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದೆ.
ಆಡಳಿತದಲ್ಲಿರುವ ಕೇರಳದಲ್ಲೂ ಕಾಂಗ್ರೆಸ್ ಸೋಲು ಕಾಣಲಿದೆ, ಪಶ್ಚಿಮಬಂಗಾಳದಲ್ಲಿ ಟಿಎಂಸಿ ಮತ್ತೆ ಜಯ ಸಾಧಿಸಲಿದೆ.
126 ಸ್ಥಾನಗಳುಳ್ಳ ಅಸ್ಸಾಂನಲ್ಲಿ ಬಿಜೆಪಿ 79 ರಿಂದ 93 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 294 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಪಡೆದುಕೊಳ್ಳಲಿದೆ.
ಡಿಎಂಕೆ ಹೆಚ್ಚು ಸ್ಥಾನಗಳನ್ನು ತಮಿಳುನಾಡಿನಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಎಐಎಡಿಎಂಕೆ ಹಿಂದಿಗಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ. ಆದರೂ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಬಿಜೆಪಿ 0-3 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ.
ಪುದುಚೇರಿಯಲ್ಲೂ ಡಿಎಂಕೆ ಜಯ ಗಳಿಸುವ ಸಾಧ್ಯತೆ ಇದೆ. ಕೇರಳದಲ್ಲಿ ಎಡ ಪಕ್ಷ ಮತ್ತೆ ಅಧಿಕಾರಕ್ಕೇರಬಹುದು ಎಂಬ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.