ಮಂಗಳೂರು : ಎತ್ತಿನಹೊಳೆ ಯೋಜನೆ ವಿರೋಧಿಸಿ ಮೇ ೧೯ರಂದು ನಡೆಯಲಿರುವ ಸ್ವಯಂ ಘೋಷಿತ ದ.ಕ.ಜಿಲ್ಲಾ ಬಂದ್ಗೆ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಬೆಂಬಲ ಸೂಚಿಸಿದ್ದಾರೆ.
ಎತ್ತಿನಹೊಳೆ ಯೋಜನೆಯಿಂದ ದ.ಕ. ಜಿಲ್ಲೆಯ ಜೀವನದಿ ನೇತ್ರಾವತಿ ಬರಡಾಗಲಿದೆ. ಈ ಬಗ್ಗೆ ಜಿಲ್ಲೆಯ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ, ರಾಜ್ಯ ಸರಕಾರ ಜಿಲ್ಲೆಯ ಜನತೆಯ ಭಾವನೆಗಳಿಗೆ ಯಾವುದೇ ಬೆಲೆ ನೀಡದೆ ಹಠಮಾರಿ ಧೋರಣೆಯನ್ನೇ ಅನುಸರಿಸಿದೆ.
ಇದೀಗ ಮತ್ತೆ ದ.ಕ. ಜಿಲ್ಲೆಯ ಜನತೆ ಬಂದ್ಗೆ ಮುಂದಾಗಿರುವುದಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದವರು ಆರೋಪಿಸಿದ್ದಾರೆ. ಕರಾವಳಿಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಹೋರಾಟಗಳು ನಿರ್ಣಾಯಕವಾಗಲಿದೆ.
ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿಯುತ ಹಾಗೂ ಸ್ವಯಂಘೋಷಿತ ಬಂದ್ಗೆ ಪೂರ್ಣ ಬೆಂಬಲ ನೀಡಬೇಕು.
ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಬಂದ್ ಹೋರಾಟ ಯಶಸ್ವಿಯಾಗಲು ಪೂರ್ಣ ಸಹಕಾರ ನೀಡಬೇಕೆಂದು ಅವರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.