ನವದೆಹಲಿ: ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಚತೆಯನ್ನು ಖಾತ್ರಿಪಡಿಸುವ 15 ದಿನಗಳ ’ಸ್ವಚ್ಛ ಕಚೇರಿ ಯೋಜನೆ’ಗೆ ಚಾಲನೆ ನೀಡಲಾಗಿದೆ.
ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ನಿರ್ಮಾಣ್ ಭವನದಲ್ಲಿ ಬೇವಿನ ಸಸಿ ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಿ ಕಚೇರಿಯ ಪರಿಶೀಲನೆ ನಡೆಸಿದರು.
ಸ್ವಚ್ಛತೆಯಲ್ಲಿ ಹೆಚ್ಚಿನ ವ್ಯಾಪ್ತಿಯಲ್ಲಿ ಸುಧಾರಣೆ ಕಂಡುಬಂದಿದ್ದು, ಗಣನೀಯ ಸುಧಾರಣೆಗೆ ಅವಕಾಶಗಳಿವೆ ಎಂದು ಹೇಳಿದ್ದಾರೆ. ಒಟ್ಟು ನೈರ್ಮಲ್ಯವನ್ನು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವಂತೆ ಸಚಿವಾಲಯದ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವ ನಾಯ್ಡು ನಿರ್ದೇಶಿಸಿದ್ದಾರೆ.
ವಿದ್ಯುತ್ ವಿತರಣಾ ಮಂಡಳಿಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.
ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ನೈರ್ಮಲ್ಯ ಖಚಿತಪಡಿಸಲು ಎಲ್ಲಾ ಕೇಂದ್ರ ಸಚಿವಾಲಯಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಗುಣಮಟ್ಟ ಕಚೇರಿ ಕಾರ್ಯವಿಧಾನಗಳುಳ್ಳ ಸ್ವಚ್ಛ ಕಚೇರಿ ಕೈಪಿಡಿಯನ್ನು ವಿತರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.