ಬೆಂಗಳೂರು : ಮಹಿಳೆಯರಲ್ಲಿ ವಿಜ್ಞಾನ ಮತ್ತು ಗಣಿತ ಶಿಕ್ಷಣವನ್ನು ಜನಪ್ರಿಯಗೊಳಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇತ್ತೀಚೆಗೆ ಸ್ಥಾಯಿ ಸಮಿತಿಯನ್ನು ರಚಿಸಿದ್ದು, ಆ ಸಮಿತಿಯು ಮಹಿಳೆಯರು ವಿಜ್ಞಾನ ಮತ್ತು ಗಣಿತ ಕ್ಷೇತ್ರದಲ್ಲಿ ಹೆಚ್ಚೆಚ್ಚು ತಮ್ಮನ್ನು ತೊಡಗಿಸಿಕೊಂಡು ಈ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯುವಂತೆ ಯೋಜನೆಯ ರೂಪುರೇಷೆಗಳನ್ನು ಮಾಡಲಾಗಿದೆ.
ಈ ಸಮಿತಿಯ ಮೊದಲ ಸಭೆಯು ಬೆಂಗಳೂರಿನ ಇಂಡಿಯನ್ ಇನ್ಸ್ಟ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ನಡೆಯಿತು. ಸಿ.ಯು.ಆರ್.ಐ.ಇ ಎಂಬ ಕಾರ್ಯಕ್ರಮದ ಮೂಲಕ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮಹಿಳೆಯರನ್ನು ಈ ಕಾರ್ಯಕ್ರಮದತ್ತ ಸೆಳೆಯಲು ಮತ್ತು ಸಂಶೋಧನಾ ಯುನಿವರ್ಸಿಟಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲು ಮತ್ತು ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನವನ್ನು ನೀಡಲಾಗುವುದು.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ‘ಉಡಾನ್’ ಕಾರ್ಯಕ್ರಮದ ಸಫಲತೆಗಾಗಿ ಸಮಿತಿಯನ್ನು ರಚಿಸಿದ್ದು, ಕೇಂದ್ರ ಸರಕಾರ ಮಹಿಳೆಯರನ್ನು ವಿಜ್ಞಾ ನ ಮತ್ತು ಗಣಿತ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹಿಳೆಯರನ್ನು ಶಿಕ್ಷಿತಗೊಳಿಸಲು ‘ಉಡಾನ್’ ಎಂಬ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕಾಗಿ ಸರಕಾರ ಮಹಿಳೆಯರಿಗಾಗಿ ಉಚಿತ ಆನ್ಲೈನ್ ಶಿಕ್ಷಣ ನೀಡಲು ಚಿಂತನೆ ನಡೆಸಿದ್ದು ರಾಷ್ಟ್ರಾದ್ಯಂತ ಸುಮಾರು ೧೦೦೦ ಮುಂದಿ ಮಹಿಳೆಯರು ಇದರ ಲಾಭಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.