×
Home About Us Advertise With s Contact Us

ಏ. 6 ರಂದು ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ

imgresಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಚೇರಿ ಎದುರು ರಚನೆಯಾಗಲಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಏ. 6 ಸೋಮವಾರ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು, ದ.ಕ. ಜಿಲ್ಲಾಧಿಕಾರಿ ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Recent News

Back To Top
error: Content is protected !!