ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಅವರು, ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಸಿಕ್ಕ ಮನ್ನಣೆ ಎಂದು ವಿಶ್ಲೇಷಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ 9 ರಾಜ್ಯಗಳಲ್ಲಿ ಈಗ ಬಿಜೆಪಿ ಅಧಿಕಾರದಲ್ಲಿದೆ. ಎರಡು ವರ್ಷಗಳಿಂದ ಎಲ್ಲಾ ಚುನಾವಣೆಗಳಲ್ಲೂ ಮತಗಳ ಪ್ರಮಾಣವನ್ನು ನಾವು ಹೆಚ್ಚಿಸಿಕೊಂಡಿದ್ದೇವೆ’ ಎಂದರು.
ಕೇರಳದಲ್ಲಿ ಒಂದು ಸ್ಥಾನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದೇವೆ, ತಮಿಳುನಾಡು, ಪುದುಚೇರಿಯಲ್ಲೂ ಮತಪ್ರಮಾಣ ಹೆಚ್ಚಾಗಿದೆ ಎಂದರು.
ಅಲ್ಲದೇ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೀಗ ಅಪ್ರಸ್ತುತ. ಕಾಂಗ್ರೆಸ್ ದುರಾಡಳಿತ ಮತ್ತು ಭ್ರಷ್ಟಾಚಾರದ ಸಂಕೇತ ಎಂದು ಜನ ಭಾವಿಸಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.