ನವದೆಹಲಿ: ಅಸ್ಸಾಂ ಮತ್ತು ಕೇರಳದ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿ ಮಾಡಿರುವ ಬಿಜೆಪಿ ಇದೀಗ 2019ರ ಲೋಕಸಭಾ ಚುನಾವಣೆಯ ಮೇಲೆ ಗಮನವನ್ನು ಕೇಂದ್ರೀಕರಿಸಿದೆ.
ಎರಡು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡ ಬಿಜೆಪಿ ಕಾಂಗ್ರೆಸ್ನ ಭದ್ರಕೋಟೆ ಎನಿಸಿದ ಅಸ್ಸಾಂನಲ್ಲೇ ಕಾಂಗ್ರೆಸ್ನ್ನು ಮಣಿಸಿದೆ. ಇದರ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಸ್ಟ್ರೆಟಜಿ ಕೂಡ ಕಾರ್ಯ ನಿರ್ವಹಿಸಿದೆ.
ಪಶ್ಚಿಮಬಂಗಾಳ ಮತ್ತು ಕೇರಳದಲ್ಲಿ ಮತಗಳ ಪ್ರಮಾಣವನ್ನು ಏರಿಸಿಕೊಂಡಿರುವ ಬಿಜೆಪಿ ತನ್ನ ಕಾಂಗ್ರೆಸ್ ಮುಕ್ತ ಭಾರತದ ಗುರಿಯಲ್ಲಿ ಎರಡು ಹೆಜ್ಜೆ ಮುಂದೆ ಸಾಗಿದೆ.
ತಮ್ಮ ಗೆಲುವಿನ ಬಗ್ಗೆ ಮಾಧ್ಯಮಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅಮಿತ್ ಷಾ, ’ಯಾರು ಕಾಂಗ್ರೆಸ್ನೊಂದಿಗೆ ದೋಸ್ತಿ ಮಾಡಿಕೊಳ್ಳುತ್ತಾರೋ ಅವರು ಸೋಲುತ್ತಾರೆ ಎಂಬುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ. ಬಿಜೆಪಿಯ ಬೇರು ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಒರಿಸ್ಸಾ, ಅಸ್ಸಾಂನಲ್ಲಿ ಗಟ್ಟಿಗೊಳ್ಳುತ್ತಿದೆ. 2019ರ ಚುನಾವಣೆಯ ವೇಳೆಗೆ ನಾವು ನಮ್ಮ ಬೆಂಬಲವನ್ನು ಸ್ಥಾನಗಳಾಗಿ ಪರಿವರ್ತನೆಗೊಳಿಸುತ್ತೇವೆ ಎಂಬ ನಂಬಿಕೆ ಇದೆ’ ಎಂದಿದ್ದಾರೆ.
ಒಟ್ಟಿನಲ್ಲಿ ಪಂಚರಾಜ್ಯಗಳ ಚುನಾವಣೆ ಗೆಲುವು ಬಿಜೆಪಿಯಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.