ನವದೆಹಲಿ: ಅಸ್ಸಾಂನಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದರೂ ಪ್ರಧಾನಿ ನರೇಂದ್ರ ಮೋದಿಯವರು ವಿಶ್ರಾಂತಿಯನ್ನು ಪಡೆದುಕೊಳ್ಳುವ ಮೂಡ್ನಲ್ಲಿ ಇಲ್ಲ, ಅವರ ಗಮನ ಇದೀಗ ದೇಶದ ಅತೀದೊಡ್ಡ ರಾಜ್ಯ ಉತ್ತರಪ್ರದೇಶದ ಮೇಲೆ ನೆಟ್ಟಿದೆ.
ಮುಂದಿನ ವರ್ಷ ಯುಪಿಯಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಗಮನ ಕೇಂದ್ರಿಕರಿಸಿರುವ ಅವರು ತನ್ನ ಸಂಪುಟದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಮುಂದಾಗಿದ್ದಾರೆ.
ಉತ್ತರಪ್ರದೇಶದ ಕೆಲ ಹೊಸ ಮುಖಗಳು ಮೋದಿ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಕಾರ್ಯದಲ್ಲಿ ಹಿಂದೆ ಬಿದ್ದಿರುವ ಕೆಲ ಸಚಿವರು ಸಂಪುಟದಿಂದ ಹೊರ ಬೀಳುವ ಸಾಧ್ಯತೆ ಇದೆ.
ಅಮಿತ್ ಷಾ ಅವರೂ ಹೊಸ ನಾಯಕರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಹೊಸ ಉಪಾಧ್ಯಕ್ಷರನ್ನು, ಪ್ರಧಾನ ಕಾರ್ಯದರ್ಶಿಗಳನ್ನು ಅವರು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಜೆಪಿ ನಡ್ಡಾ, ಪ್ರಕಾಶ್ ಜಾವ್ಡೇಕರ್, ಗಿರಿರಾಜ್ ಸಿಂಗ್ ಸಂಪುಟದಿಂದ ಹೊರ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.