ಡೆಹ್ರಾಡೂನ್: ದಲಿತ ನಾಯಕರೊಂದಿಗೆ ಡೆಹ್ರಾಡೂನಿನ ಚಕ್ರತಾದ ದೇಗುಲವೊಂದರಿಂದ ಹೊರಗೆ ಬರುತ್ತಿದ್ದ ವೇಳೆ ಬಿಜೆಪಿ ಸಂಸದ ತರುಣ್ ವಿಜಯ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿದ್ದಾರೆ.
ಶುಕ್ರವಾರ ಈ ಘಟನೆ ನಡೆದಿದ್ದು, ಉತ್ತರಾಖಂಡ ಸಿಎಂ ಹರೀಶ್ ರಾವತ್ ಅವರು ಈ ಬಗ್ಗೆ ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಚಕ್ರತಾ ಡೆಹ್ರಾಡೂನಿನಿಂದ ಸುಮಾರು 180 ಕಿ.ಮೀ ದೂರದಲ್ಲಿದೆ, ಇಲ್ಲಿನ ಸೆಲ್ಗುರ್ ದೇವತಾ ದೇಗುಲಕ್ಕೆ ಹಿಂದುಳಿದ ವರ್ಗದವರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಆದರೆ ಬಿಜೆಪಿ ರಾಜ್ಯಸಭಾ ಸಂಸದರಾದ ತರುಣ್ ವಿಜಯ್ ಅವರು ದಲಿತ ನಾಯಕರೊಂದಿಗೆ ಈ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಆದರೆ ಅವರು ಹೊರಗೆ ಬರುತ್ತಿದ್ದಂತೆ ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ. ಅಲ್ಲದೇ ಅವರ ಕಾರನ್ನು ಪುಡಿ ಪುಡಿ ಮಾಡಿ ಹಾಕಿದೆ.
ಬಳಿಕ ಪೊಲೀಸರು ಆಗಮಿಸಿ ತರುಣ್ ಅವರನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.