ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಬಾರಿ ಅವರು ಜಲ, ಪರಿಸರ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದರು. ನೀರನ್ನು ಪರಮಾತ್ಮನ ಪ್ರಸಾದ ಎಂದು ಬಣ್ಣಿಸಿದ ಅವರು ಜಲ ಸಂರಕ್ಷಣಾ ಅಭಿಯಾನವನ್ನು ನಡೆಸುವುದು ಅನಿವಾರ್ಯ ಎಂದರು.
ಅಲ್ಲದೇ ಕರ್ನಾಟಕದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಹಮ್ಮಿಕೊಂಡಿಕೊರುವ ಕಲ್ಯಾಣಿಗಳ ಅಭಿವೃದ್ಧಿ ಕಾರ್ಯವನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು.
ಮಳೆಗಾಲದಲ್ಲಿ ಮಳೆ ಕೊಯ್ಲು ಮೂಲಕ ನೀರನ್ನು ಸಂರಕ್ಷಣೆ ಮಾಡಬೇಕು, ಅಂತರ್ಜಲ ಮಟ್ಟವನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.