ಚೆನ್ನೈ: ಸತತ ಎರಡನೇ ಬಾರಿಗೆ ಜೆ.ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಆರನೇ ಬಾರಿಗೆ ಅವರು ಸಿಎಂ ಪಟ್ಟವನ್ನು ಅಲಂಕರಿಸುತ್ತಿದ್ದು, ಪ್ರಮಾಣವಚನ ಸಮಾರಂಭಕ್ಕೆ ದೇಶದ ಗಣ್ಯಾತೀಗಣ್ಯರು ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೂ ಆಹ್ವಾನವಿದ್ದು, ಅವರು ಇರಾನ್ ಪ್ರವಾಸದಲ್ಲಿರುವ ಕಾರಣ ಸಚಿವ ವೆಂಕಯ್ಯ ನಾಯ್ಡು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ ಡಿಎಂಕೆ, ಕಾಂಗ್ರೆಸ್ ಮೈತ್ರಿಯನ್ನು ಧೂಳಿಪಟ ಮಾಡಿ ಸ್ಪಷ್ಟ ಬಹುಮತ ಪಡೆದುಕೊಂಡಿತ್ತು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.