ನವದೆಹಲಿ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಅಜಯ್ ಶ್ರೀಕೆ ಅವರು ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಶಶಾಂಕ್ ಮನೋಹರ್ ಅವರು ಐಸಿಸಿಯಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಬಿಜೆಪಿ ಸಂಸದನೂ ಆಗಿರುವ ಅನುರಾಗ್ ಠಾಕೂರ್ ಹಲವಾರು ವರ್ಷಗಳಿಂದ ಬಿಸಿಸಿಐನಲ್ಲಿ ಉನ್ನತ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಬಂದಿದ್ದಾರೆ. ಇದೀಗ ಅವರು ಬಿಸಿಸಿಐನ ೩೪ನೇ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.