ಗೌಹಾಟಿ : ಅಸ್ಸಾಂ ಮುಖ್ಯಮಂತ್ರಿಯಾಗಿ ಸರ್ಬಾನಂದ ಸೋನೋವಾಲ್ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರೊಂದಿಗೆ 10 ಮುಂದಿ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಬಾರಿ ನಡೆದ ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೈತ್ರಿಕೂಟ ಗೆಲುವನ್ನು ಸಾಧಿಸಿದ್ದು, ಅಸ್ಸಾಂನಲ್ಲಿ ಮೊದಲ ಬಾರಿಗೆ ಬಹುಮತಗಳೊಂದಿಗೆ ಬಿಜೆಪಿ ಗೆಲುವನ್ನು ಸಾಧಿಸಿದೆ. ಇದೇ ಸಂದರ್ಭದಲ್ಲಿ ಮೈತ್ರಿ ಪಕ್ಷಗಳಾದ ಅಸ್ಸಾಂ ಗಣ ಪರಿಷದ್ ಮತ್ತು ಬೋಡೋ ಲ್ಯಾಂಡ್ ಪೀಪಲ್ ಫ್ರೆಂಟ್ನಿಂದ ಇಬ್ಬರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಚುನಾವಣೆಯ ಗೆಲುವಿಗೆ ಶ್ರಮಿಸಿದ ಹೇಮಂತ್ ಬಿಸ್ವಶರ್ಮ ಅವರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಕೇಳಿಬರುತ್ತಿದೆ.
ಪ್ರಮಾಣವಚನ ಸಮಾರಂಭವು ಖಾನ್ಪುರದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಪಕ್ಷದ ಪ್ರಮುಖ ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.