ನವದೆಹಲಿ : ನೀಟ್ ಪರೀಕ್ಷೆ ಮುಂದಿನ ವರ್ಷದಿಂದ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಲು ಸರಕಾರ ಮಾಡಿದ ಶಿಫಾರಸ್ಸಿಗೆ ಅಂಕಿತ ಹಾಕುವ ಮೂಲಕ ನೀಟ್ ಪರೀಕ್ಷೆಯನ್ನು ಒಂದು ವರ್ಷದಕಾಲವಂತೆ ಆದೇಶಿಸಲಾಗಿದೆ.
ವೈದಕೀಯ ಮತ್ತು ದಂತ ವೈದಕೀಯ ಕೋರ್ಸ್ಗಳಿಗೆ ಏಕರೂಪ ರಾಷ್ಟ್ರೀಯ ಅರ್ಹತಾ ಪರೀಕ್ಷೇಯನ್ನು ಎರ್ಪಡಿಸಿ ಪರಿಕ್ಷಾ ಗೊಂದಲ ಬಗೆಹರಿಸಲು ಆದೇಶಿಸಿದತ್ತು. ಆದನ್ನು ಪ್ರಸ್ತುತ ವರ್ಷದಿಂದ ಜಾರಿಗೆ ತರಲು ಹೇಳಿತ್ತು.
ಆದರೆ ಇದಕ್ಕೆ ಪೋಷಕರು ವಿದ್ಯಾರ್ಥಿಗಳು ಮತ್ತು ರಾಜ್ಯಸರಕಾಗಳಿಂದ ವಿರೋಧ ವ್ಯಕ್ತವಾದ ಹಿನ್ನಲೆ, ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಮುಂದಿನ ವರ್ಷದಿಂದ ಜಾರಿಗೆ ತರಲು ಸಲಹೆ ವ್ಯಕ್ತವಾಗಿತ್ತು. ಇದರಂತೆ ಕೇಂದ್ರ ಸರಕಾರ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿತ್ತು.
ಸುಗ್ರೀವಾಜ್ಞೆ ಹೊರಡಿಸಲು ಕಾರಣವಾದ ಅಂಶಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ರಾಷ್ಟ್ರಪತಿಗಳು ಕೇಂದ್ರ ಆರೋಗ್ಯ ಖಾತೆ ಸಚಿವ ಜೆ.ಪಿ.ನಡ್ಡಾ ಅವರನ್ನು ಕೋರಿದ್ದು ಬಳಿಕ ಕಾನೂನು ತಜ್ಞರೊಂದಿಗೆ ಮಾತುಕತೆ ನಡೆಸಿ ಅಂಕಿತಹಾಕಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.