ಪುತ್ತೂರು : ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿಯ ವತಿಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಆರ್ಕಿಟೆಕ್ಟ್ ಪುತ್ತೂರಿನ ಡಾ.ಹರ್ಷ ಕುಮಾರ ರೈಯವರಿಗೆ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆಡಳಿತ, ಸಾಮಾಜಿಕ, ಸಹಕಾರ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಹಾಗೂ ಸಾಧನೆ ಮಾಡಿದ ರಾಜ್ಯದ ಒಟ್ಟು 7 ಮಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಸಂದರ್ಭ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅರಳಿ ನಾಗರಾಜ್, ಬೆಂಗಳೂರು ಕೊಳದ ಮಠ ಮಹಾಸಂಸ್ಥಾನದ ಶ್ರೀ ಡಾ. ಶಾಂತವೀರ ಮಹಾಸ್ವಾಮೀಜಿ, ಮಾಜಿ ಕೇಂದ್ರ ಸಚಿವ ಡಾ.ಎಂ.ವಿ.ರಾಜಶೇಖರನ್, ಚಿತ್ರನಟಿ ಶೃತಿರಾಜ್, ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ದನ್, ಅಕಾಡೆಮಿಯ ಅಧ್ಯಕ್ಷ ಜಿ.ವಿ.ರಾಜು ಹಾಗೂ ವಿವಿಧ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.