ಮಂಗಳೂರು : ಈ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ, ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ವಿವಿಧ ಕಾಲೇಜುಗಳ ಆಡಳಿತ ಮಂಡಳಿಯವರನ್ನು ಮತ್ತು ಕಠಿಣ ಪರಿಶ್ರಮದ ಮೂಲಕ ಖ್ಯಾತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರನ್ನು ಹಾರ್ದಿಕವಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಅಭಿನಂದಿಸಿದ್ದಾರೆ.
ರಾಜ್ಯಕ್ಕೇ ಮಾದರಿಯಾಗಬಲ್ಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಪರಂಪರೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ವಿಯಾಗಿ ಮುಂದುವರೆಯುವಂತಾಗಲಿ ಎಂದು ಆಶಿಸುತ್ತಾ ಅದ್ಬುತ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಗವಂತ ಯಶಸ್ಸನ್ನು ಹಾಗೂ ಉಜ್ವಲ ಭವಿಷ್ಯವನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.