ನವದೆಹಲಿ: ತನ್ನ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ.28ರಂದು ನರೇಂದ್ರ ಮೋದಿ ಸರ್ಕಾರ ದೆಹಲಿಯ ಐತಿಹಾಸಿಕ ಇಂಡಿಯಾ ಗೇಟ್ ಬಳಿ ಬೃಹತ್ ಸಮಾರಂಭವನ್ನು ಏರ್ಪಡಿಸಿದೆ. ಈ ಸಮಾರಂಭವನ್ನು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಸಂಯೋಜನೆ ಮಾಡಲಿದ್ದಾರೆ.
ಮೇ.26ಕ್ಕೆ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದು ಸಂಪೂರ್ಣ ಎರಡು ವರ್ಷ ತುಂಬಲಿದೆ. ಈ ಎರಡು ವರ್ಷದಲ್ಲಿ ತಮ್ಮ ಸರ್ಕಾರ ಮಾಡಿದ ಸಾಧನೆ, ರೂಪಿಸಿದ ಯೋಜನೆಗಳನ್ನು ಹೈಲೈಟ್ ಮಾಡುವ ಸಲುವಾಗಿ ಮೇ.28ರಂದು 5 ಗಂಟೆಗಳ ಬೃಹತ್ ಸಮಾರಂಭವನ್ನು ಏರ್ಪಡಿಸಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಪ್ರಧಾನಿ, ವಿವಿಧ ಬಾಲಿವುಡ್ ಸ್ಟಾರ್ಗಳು, ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ.
ಗಿವ್ ಇಟ್ ಅಪ್, ಮೇಕ್ ಇನ್ ಇಂಡಿಯಾ, ಸ್ವಚ್ಛ ಭಾರತ ಯೋಜನೆಗಳನ್ನು ಹೆಚ್ಚು ಪ್ರಚಾರ ಮಾಡುವುದಕ್ಕೂ ಈ ವೇದಿಕೆಯನ್ನು ಬಳಸಿಕೊಳ್ಳುವ ಗುರಿಯನ್ನು ಸರ್ಕಾರ ಹೊಂದಿದೆ.
ಕಾರ್ಯಕ್ರಮ ದೂರದರ್ಶನದಲ್ಲಿ ನೇರಪ್ರಸಾರವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.