ನವದೆಹಲಿ; ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಂದ ನರೇಂದ್ರ ಮೋದಿ ಸರ್ಕಾರ ಕಾರ್ಯಕ್ರಮ ನಿರೂಪಣೆ ಮಾಡಿಸುತ್ತಿರುವುದಕ್ಕೆ ಕಾಂಗ್ರೆಸ್ ತೀವ್ರ ಟೀಕೆ ವ್ಯಕ್ತಪಡಿಸಿದೆ.
ಪನಾಮ ಪೇಪರ್ಸ್ ಪಟ್ಟಿಯಲ್ಲಿ ಅಮಿತಾಭ್ ಅವರ ಹೆಸರು ಇರುವುದರಿಂದ ಅವರನ್ನು ಸರ್ಕಾರದ ಕಾರ್ಯಕ್ರಮ ನಿರೂಪಿಸಲು ಕರೆದಿರುವುದು ದೇಶಕ್ಕೆ ತಪ್ಪು ಸಂದೇಶ ರವಾನಿಸಿದಂತೆ ಆಗುತ್ತದೆ ಎಂದು ಕಾಂಗ್ರೆಸ್ ನಾಯಕರುಗಳು ವಾದಿಸಿದ್ದರು.
ಆದರೀಗ ಸ್ವತಃ ಅಮಿತಾಭ್ ಅವರೇ ಮುಂದೆ ಬಂದು, ’ನಾನು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ, ನಟ ಆರ್. ಮಾಧವನ್ ಅವರು ನಿರೂಪಣೆ ಮಾಡುತ್ತಿದ್ದಾರೆ. ನನ್ನ ಹೃದಯಕ್ಕೆ ಹತ್ತಿರವಾಗಿರುವ ’ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಗೆ ಸಂಬಂಧಿಸಿದಂತೆ ಕಾರ್ಯಕ್ರಮದಲ್ಲಿ ಒಂದು ಸಣ್ಣ ಸೆಗ್ಮೆಂಟ್ ಮಾಡಲಿದ್ದೇನೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಅಮಿತಾಭ್ ಪುತ್ರ ಅಭಿಷೇಕ್ ಬಚ್ಚನ್ ಕೂಡ ತಂದೆಯನ್ನು ಸಮರ್ಥಿಸಿಕೊಂಡಿದ್ದು, ಅವರು ರಾಜಕೀಯ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ, ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಬಗ್ಗೆ ಮಾತನಾಡಲಿದ್ದಾರೆ ಅಷ್ಟೇ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.