ನವದೆಹಲಿ: ರಾಜಧಾನಿ ರೈಲಿನಲ್ಲಿ ವೇಟ್ಲಿಸ್ಟ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಬರುವ ಜೂನ್ ತಿಂಗಳಿನಿಂದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಪಡೆಯಲಿದ್ದಾರೆ.
ಏರ್ ಇಂಡಿಯಾ ಹಾಗೂ ಐಆರ್ಸಿಟಿಸಿ ಪ್ರಯಾಣಿಕರಿಗೆ ಪ್ರಸ್ತಾವಿತ ವ್ಯವಸ್ಥೆಗೆ ಒಪ್ಪಂದ ಮಾಡಿಕೊಂಡಿದ್ದು, ವೇಟ್ ಲಿಸ್ಟ್ನಲ್ಲಿರುವ ರೈಲ್ವೆ ಪ್ರಯಾಣಿಕರು ಹೆಚ್ಚುವರಿ ಮೊತ್ತವನ್ನು ಪಾವತಿಸಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬಹುದು ಎಂದು ಏರ್ ಇಂಡಿಯಾ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅಶ್ವನಿ ಲೋಹಾನಿ ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಏರ್ ಇಂಡಿಯಾ ಟಿಕೆಟ್ಗಳನ್ನು ಐಆರ್ಸಿಟಿಸಿ ಒದಗಿಸಲಿದೆ. ರಾಜಧಾನಿ ರೈಲಿನ ಎ/ಸಿ ಟಿಕೆಟ್ ಹೊಂದಿದ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಲು ಬಯಸಿದಲ್ಲಿ ಹೆಚ್ಚುವರಿ ಪಾವತಿಸುವ ಅಗತ್ಯವಿಲ್ಲ. ಆದರೆ ಎ/ಸಿ ಎರಡನೇ ಅಥವಾ ಮೂರನೇ ಹಂತದ ಟಿಕೆಟ್ ಪಡೆದ ಪ್ರಯಾಣಿಕರು ರೂ.2000 ಹೆಚ್ಚುವರಿ ಪಾವತಿಸಬೇಕಾಗುತ್ತದೆ ಎಂದು ಲೋಹಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.