ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರಿಗೆ, ಪ್ರಪಂಚದಲ್ಲಿ ಒಳ್ಳೆಯ, ಕೆಟ್ಟ ಭಯೋತ್ಪಾದಕರು ಎಂಬುದಿಲ್ಲ, ಭಯೋತ್ಪಾದಕರೆಲ್ಲಾ ಕೆಟ್ಟವರೇ ಎಂದು ಮನದಟ್ಟು ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ.
ಅಲ್ಲದೇ ವಿಶ್ವಸಂಸ್ಥೆಯಂತಹ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಹಕಾರ ನೀಡುವಂತೆ ಪ್ರಣವ್ ಚೀನಾಗೆ ಮನವಿ ಮಾಡಿದ್ದಾರೆ. ಅಲ್ಲದೇ ನ್ಯೂಕ್ಲಿಯರ್ ಸಪ್ಲೈಯರ್ಸ್ ಗ್ರೂಪ್ಗೆ ಸೇರಲು ಭಾರತ ನಿರ್ಧರಿಸಿದೆ, ಈ ನಿಟ್ಟಿನಲ್ಲಿ ಚೀನಾ ಧನಾತ್ಮಕ ಪಾತ್ರ ನಿರ್ವಹಿಸಬೇಕಿದೆ ಎಂದು ಅವರು ಕರೆ ನೀಡಿದ್ದಾರೆ.
ಪ್ರಣವ್ ಅವರು ನಾಲ್ಕು ದಿನಗಳ ಭೇಟಿಗೆ ಚೀನಾಗೆ ತೆರಳಿದ್ದು, ಅವರ ಭೇಟಿಯನ್ನು ಚೀನಾ ನಾಯಕರು ಶ್ಲಾಘಿಸಿದ್ದಾರೆ. ಅಲ್ಲದೇ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು ನೀಡುವ ಭರವಸೆ ಈ ಭೇಟಿಯಿಂದ ಮೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.