ಕೋಲ್ಕತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದ್ದರು. ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಲ್ಲದೇ, ಅವರೊಂದಿಗೆ 41 ಮಂದಿ ಸಚಿವರು ಪ್ರಮಾಣಚವನ ಸ್ವೀಕರಿಸಿದ್ದಾರೆ. ಇದರಲ್ಲಿ 17 ಮಂದಿ ಪ್ರಥಮ ಬಾರಿಗೆ ಮಂತ್ರಿಗಳಾಗಿದ್ದು, ಈ ಮೂಲಕ 17 ಮಂದಿ ಹೊಸಬರಿಗೆ ಅವಕಾಶ ನೀಡಿದಂತಾಗಿದೆ.
ಪ್ರಮಾಣವಚನ ಸಮಾರಂಭವು ಐಷಾರಾಮಿ ಮತ್ತು ಅದ್ದೂರಿಯಾಗಿ ನಡೆದಿದ್ದು, ಅದಕ್ಕಾಗಿ ಬೃಹತ್ ವೇದಿಕೆ, ವಿಐಪಿ ಮತ್ತು ವಿವಿಐಪಿಗಳಿಗೆ ಹವಾನಿಯಂತ್ರಿತ ವ್ಯವಸ್ಥೆ ಸೇರಿದಂತೆ ವೈಭವೋಪೇತವಾಗಿ ಕಾರ್ಯಕ್ರಮ ನಡೆದಿದೆ.
ಕಾರ್ಯಕ್ರಮದಲ್ಲಿ ಭೂತಾನ್ ಪ್ರಧಾನಮಂತ್ರಿ, ಬಾಂಗ್ಲಾದೇಶದ ಕೈಗಾರಿಕಾ ಸಚಿವ, ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು, ಬಾಬುಲ್ ಸುಪ್ರಿಯೋ, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಭಾಗವಹಿಸಿದ್ದರು. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಶಾರುಕ್ ಖಾನ್ ಮತ್ತು ಓಂಪುರಿ, ಉದ್ಯಮಿ ಮುಖೇಶ್ ಅಂಬಾನಿ ಸೇರಿದಂತೆ 140 ಮಂದಿ ಗಣ್ಯರು ಸೇರಿದಂತೆ 40 ಸಾವಿರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.