ನವದೆಹಲಿ: ಪಾಕಿಸ್ಥಾನದ ಪ್ರಧಾನಿ ನವಾಝ್ ಶರೀಫ್ ಅವರು ಮುಂದಿನ ಮಂಗಳವಾರ ಅಮೆರಿಕಾದಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ’ಮುಂದಿನ ಮಂಗಳವಾರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ನನ್ನ ಶುಭ ಕಾಮನೆಗಳು, ಶೀಘ್ರವಾಗಿ ಗುಣಮುಖರಾಗಿ, ಉತ್ತಮ ಆರೋಗ್ಯ ನಿಮ್ಮದಾಗಲಿ’ ಎಂದಿದ್ದಾರೆ.
ವೈದ್ಯರ ಸಲಹೆಯಂತೆ ಶರೀಫ್ ಅವರು ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ತಂಗಲಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಪಾಕ್ಗೆ ವಾಪಾಸ್ ಪ್ರಯಾಣ ಮಾಡಲಿದ್ದಾರೆ ಎಂದು ಪಾಕ್ ರಕ್ಷಣಾ ಸಚಿವ ಖಾವಜಾ ಆಸೀಫ್ ಮಾಹಿತಿ ನೀಡಿದ್ದಾರೆ.
ಶರೀಫ್ ಮಗಳು ಮರಿಯಂ ನವಾಝ್ ಕೂಡ ತನ್ನ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದನ್ನು ಖಚಿತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.