ಮೂಡಬಿದರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಸಂಸ್ಥೆಗಳಲ್ಲಿ ಪ್ರಮುಖವಾಗಿರುವ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಅನಂತ್ ಜಿ. ಇವರು 2016ನೇ ಸಾಲಿನ ಕರ್ನಾಟಕ ರಾಜ್ಯದ ಸಿಇಟಿ ಪರೀಕ್ಷೆಯ ಮೆಡಿಕಲ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಉತ್ತರ ಕನ್ನಡದ ಇಡುಗುಂಜಿ ಮೂಲದವರಾದ ಅನಂತ್ ಜಿ. ಅವರು ಬೆಳೆದಿರುವುದು ಬೆಂಗಳೂರಿನಲ್ಲಿ. ಎಸ್.ಎಸ್.ಎಲ್.ಸಿ ಯಲ್ಲಿ 98% ಪಡೆದಿರುವ ಅವರು ಪಿಯುಸಿ ಪರೀಕ್ಷೆಯಲ್ಲಿ 97.7%(580)ಅಂಕಗಳನ್ನು ಪಡೆದಿದ್ದಾರೆ. ಸಿಇಟಿಯಲ್ಲಿ ಮೆಡಿಕಲ್, ಕೃಷಿ, ವೆಟರ್ನರಿಯಲ್ಲಿ ಪ್ರಥಮ, ಬಿ ಫಾರ್ಮಾ ಹಾಗೂ ಡಿ ಫಾರ್ಮದಲ್ಲಿ ಆರನೇ ಸ್ಥಾನ ಮತ್ತು ಇಂಜಿನಿಯರಿಂಗ್ನಲ್ಲಿ 18ನೇ ಸ್ಥಾನವನ್ನು ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಮಾಡಲಿರುವ ಅನಂತ್ ಅವರಿಗೆ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಿರಲಿ ಎಂದು ಹಾರೈಸುತ್ತೇವೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಲೆ, ಕ್ರೀಡೆ, ಸಂಸ್ಕೃತಿಯೊಂದಿಗೆ ಶಿಕ್ಷಣವನ್ನು ನೀಡುವ ಮೂಲಕ ಶಿಸ್ತುಬದ್ಧ ಬದುಕನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡುತ್ತಿದೆ. ಇದರ ಫಲವೆಂಬಂತೆ ಸತತ 8 ವರ್ಷಗಳಿಂದ 99% ಫಲಿತಾಂಶವನ್ನು ಪಿಯುಸಿ ಪರೀಕ್ಷೆಯಲ್ಲಿ ದಾಖಲಿಸುತ್ತಿದೆ. ಈ ವರ್ಷವೂ ಕೂಡ 4251 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜೊತೆಯಲ್ಲಿ ಜೆಇಇ ಪರೀಕ್ಷೆಯಲ್ಲಿ 483 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಸಿಇಟಿ ಫಲಿತಾಂಶದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದು ಅವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.