ಜೈಪುರ: ರಕ್ತದಾನದ ಮಹತ್ವವನ್ನು ಸಾರಲು, ವಿದ್ಯಾರ್ಥಿಗಳನ್ನು ರಕ್ತದಾನ ಮಾಡುವಂತೆ ಪ್ರೇರೇಪಣೆ ನೀಡಲು ರಾಜಸ್ಥಾನದ ಸರ್ಕಾರಿ ಕಾಲೇಜುಗಳಲ್ಲಿ ವಿನೂತನ ಅಭಿಯಾನವೊಂದನ್ನು ಆರಂಭಿಸಲಾಗಿದೆ.
ರಕ್ತದಾನ ಮಾಡಿರುವ ವಿದ್ಯಾರ್ಥಿಗಳಿಗೆ ರಾಜಸ್ಥಾನದ ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರವೇಶಾತಿ ಅಂಕಗಳಲ್ಲಿ ಶೇ.1 ರಷ್ಟು ಹೆಚ್ಚುವರಿ ಅಂಕಗಳನ್ನು ನೀಡಲು ನಿರ್ಧರಿಸಲಾಗಿದೆ.
ರಾಜಸ್ಥಾನದ ಸರ್ಕಾರದ 2016-17 ರ ಪ್ರವೇಶಾತಿ ನಿಯಮದ ಅನ್ವಯ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಇದರಂತೆ ಮೂರು ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಿರುವ ವಿದ್ಯಾರ್ಥಿಗಳು, ತಾವು ರಕ್ತದಾನ ಮಾಡಿದ ಬಗ್ಗೆ ದಾಖಲೆಯನ್ನು ಒದಗಿಸಿದರೆ ಪ್ರವೇಶಾಂತಿ ಅಂಕಗಳಲ್ಲಿ ಶೇ.1ರಷ್ಟು ಹೆಚ್ಚುವರಿ ಅಂಕಗಳನ್ನು ಪಡೆದುಕೊಳ್ಳಲಿದ್ದಾರೆ. ರಾಜಸ್ಥಾನದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಈ ನಿಯಮ ಜಾರಿಯಲ್ಲಿದೆ.
ಅಷ್ಟೇ ಅಲ್ಲದೇ ಮೂರು ವರ್ಷದಲ್ಲಿ ಮೂರು ಅನಕ್ಷರಸ್ಥರಿಗೆ ಅಕ್ಷರ ಕಲಿಸಿದ ವಿದ್ಯಾರ್ಥಿಗಳೂ ಶೇ.0.5 ರಷ್ಟು ಬೋನಸ್ ಅಂಕ ಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.