ಜೈಪುರ : ಕೇಂದ್ರ ಸಂಸದೀಯ ಮತ್ತು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥೂರ್ ಮತ್ತು ರಾಜಸ್ಥಾನದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಇಂದು ಸಾಮಪತ್ರ ಸಲ್ಲಿಸಿದ್ದಾರೆ.
ಸಚಿವ ವೆಂಕಯ್ಯ ನಾಯ್ಡು, ಓಂ ಪ್ರಕಾಶ್ ಮಾಥೂರ್, ರಾಜ್ ಕುಮಾರ್ ವರ್ಮ, ಹರ್ಷವರ್ಧನ್ ಸಿಂಗ್ ಅವರು ಇಂದು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರ ರಾಜೆ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಅಶೋಕ್ ಪರನಾಮಿ ಉಪಸ್ಥಿತಿಯಲ್ಲಿ ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ವಸುಂಧರಾ ರಾಜೆಯವರು ದಲಿತರ ಪರವಾಗಿರುವ ನನ್ನ ಸಾಮಾಜಿಕ ಕಳಕಳಿಯನ್ನು ಗುರುತಿಸಿ ತನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥೂರ್ ವಸುಂಧರಾ ರಾಜೆಯವರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಹರಿಯಾಣದ ಚಂಡೀಗಢದಿಂದ ಗ್ರಾಮೀಣಾಭಿವೃದ್ಧಿ ಸಚಿವ ಬಿರೇಂದ್ರ ಸಿಂಗ್ ಅವರು ಹರಿಯಾಣದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದಂರ್ಭದಲ್ಲಿ ಬಿಜೆಪಿ ತನ್ನ ರಾಜ್ಯಸಭಾ ಸ್ಥಾನಗಳನ್ನು ಹೆಚ್ಚಿಸುವ ತಂತ್ರಗಾರಿಕೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.