ಮೈಸೂರು: ಹಿರಿಯ ಸಾಹಿತಿ, ಕುವೆಂಪು ಅವರ ಶಿಷ್ಯರಾಗಿದ್ದ ದೇಜಗೌ ಎಂದೇ ಪ್ರಖ್ಯಾತರಾಗಿದ್ದ ಡಾ. ದೇ. ಜವರೇಗೌಡ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರಿಗೆ ಉಸಿರಾಟದ ತೊಂದರೆ ಕಂಡು ಬಂದ ಹಿನ್ನೆಲೆಯಲ್ಲಿ ಶನಿವಾರ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.
1918 ಜುಲೈ 8 ರಂದು ರಾಮನಗರದ ಚನ್ನಪಟ್ಟಣ ತಾಲೂಕಿನ ಚಕ್ಕರೆಯಲ್ಲಿ ಇವರು ಜನಿಸಿದ್ದು, ಬಾಲ್ಯದಿಂದಲೇ ಸಾಹಿತ್ಯದೆಡೆಗಿನ ಆಸಕ್ತಿ ಇವರನ್ನು ಕವನಗಳನ್ನು ರಚಿಸುವಂತೆ ಪ್ರೇರೇಪಿಸಿತ್ತು. ಕುವೆಂಪು ಅವರ ಸಾಹಿತ್ಯಗಳಿಂದ ಪ್ರಭಾವಿತರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರೆದರು. ಅಧ್ಯಾಪಕ, ಪ್ರಾಧ್ಯಾಪಕ, ಕುಲಪತಿ ಹುದ್ದೆ ಸೇರಿದಂತೆ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ದೇಜಗೌ ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ದೇಜಗೌ ಅವರ ಅಂತ್ಯಕ್ರಿಯೆ ಜಯಲಕ್ಷ್ಮಿ ಪುರಂನಲ್ಲಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ ಎನ್ನಲಾಗಿದೆ.
ಅನೇಕ ಗಣ್ಯರು, ಸಾಹಿತಿಗಳು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.