ದೆಹಲಿ: ಆದಿ ಶಂಕರಾಚಾರ್ಯರ ಜನ್ಮದಿನವನ್ನು ’ರಾಷ್ಟ್ರೀಯ ತತ್ವಜ್ಞಾನಿ’ಗಳ ದಿನವನ್ನಾಗಿ ಆಚರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಮೇ 11 ರಂದು ಮಹಾಗುರು ಶಂಕರಾಚಾರ್ಯರ ಜನ್ಮದಿನ. ಈ ದಿನವನ್ನು ತತ್ವಜ್ಞಾನಿಗಳ ದಿನವನ್ನಾಗಿ ಆಚರಿಸಬೇಕು ಎಂದು ಎನ್ಜಿಓವೊಂದು ಕೇಂದ್ರಕ್ಕೆ ಮನವಿ ಮಾಡಿದೆ. ಈ ಮನವಿಯನ್ನು ಕೇಂದ್ರ ಪುರಸ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಿರಿಯ ಆರ್ಎಸ್ಎಸ್ ಸದಸ್ಯ ಪಿ.ಪರಮೇಶ್ವರ್ ಅವರು ಸ್ಥಾಪಿಸಿದ ನವೋದಯಂ ಎಂಬ ಎನ್ಜಿಓ ಈ ಪ್ರಸ್ತಾವಣೆಯನ್ನು ಕೇಂದ್ರಕ್ಕೆ ಕಳುಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.