ನವದೆಹಲಿ: ಕೇಂದ್ರದ ಭೂಸ್ವಾಧೀನ ಮಸೂದೆಯ ವಿರುದ್ಧ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ದೆಹಲಿಯ ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ದುರಂತವೊಂದು ನಡೆದು ಹೋಗಿದೆ. ರೈತನೊಬ್ಬ ಸಮಾವೇಶದಲ್ಲೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ರಾಜಸ್ಥಾನ ಮೂಲದವನು ಎಂದು ಗುರುತಿಸಲಾಗಿದ್ದ, ಸಮಾವೇಶಕ್ಕೆ ಆಗಮಿಸಿದ್ದ ಈತ ಅಲ್ಲೇ ಇದ್ದ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಆತನನ್ನು ತಡೆಯಲು ಕಾರ್ಯಕರ್ತರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಬಳಿಕ ಆತನನ್ನು ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಆತ ಮೃತಪಟ್ಟಿದ್ದಾನೆ.
ಇದೀಗ ಆತ್ಮಹತ್ಯೆ ನಡೆಯಲು ಪೊಲೀಸರೇ ಕಾರಣ, ರೈತ ಆತ್ಮಹತ್ಯೆ ಮಾಡುವುದನ್ನು ಅವರು ತಡೆಯಲು ಪ್ರಯತ್ನಿಸಲಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಸಮಾವೇಶದ ಆಯೋಜಕರು ಜವಾಬ್ದಾರಿಯುತವಾಗಿ, ಸೂಕ್ಷ್ಮವಾಗಿ ನಡೆದುಕೊಳ್ಳಬೇಕಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ.
ಸಮಾವೇಶದ ಸಂದರ್ಭ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಸುತ್ತಮುತ್ತಲಿದ್ದ ಕಾರ್ಯಕರ್ತರು, ಪೊಲೀಸರು ಶೀಘ್ರ ಕಾರ್ಯೋನ್ಮುಖರಾಗಬೇಕಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.