ಸುಳ್ಯ : ಸಮಾಜದಲ್ಲಿ ತಂಬಾಕು ವಿವಿಧ ರೂಪಗಳಲ್ಲಿ ಉಪಯೋಗಿಸಲ್ಪಡುತ್ತದೆ. ತಂಬಾಕು ಆರೋಗ್ಯಕ್ಕೆ ಹಾನಿಕಾರಕ. ಯಾವುದೇ ದುರಾಭ್ಯಾಸವನ್ನು ಆರಂಭಿಸಿದರೆ ಮತ್ತೆ ಅದು ಚಟವಾಗಿ ಬಿಡುವುದು. ಇದರಿಂದ ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ಹೃದಯ ಮತ್ತು ಲಿವರ್ನ ತೊಂದರೆಗಳು ಬಾಧಿಸುವುದು. ಹಾಗಾಗಿ ತಂಬಾಕು ಸೇವನೆಯಿಂದ ನೀವೂ ದೂರವಿರಿ, ಇತರರಿಗೂ ತಿಳಿ ಹೇಳಿ ಎಂದು ಡಾ.ಜಯಪ್ರಸಾದ್ ಆನೇಕಾರ್ ಅವರು ಹೇಳಿದರು.
ಅವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಸುಳ್ಯ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಓರಲ್ ಮೆಡಿಸಿನ್ ಮತ್ತು ರೇಡಿಯೋಲಾಜಿ ವಿಭಾಗ ಹಾಗೂ ಭಾರತೀಯ ಓರಲ್ ಮೆಡಿಸಿನ್ ಮತ್ತು ರೇಡಿಯೋಲಾಜಿ ಆಕಾಡೆಮಿಯ ಸಹಭಾಗಿತ್ವದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಯಾವುದೇ ಕೆಟ್ಟ ಅಭ್ಯಾಸವನ್ನು ಮೂಲದಲ್ಲೇ ಚಿವುಟಬೇಕು ಎಂದರು. ವೇದಿಕೆಯಲ್ಲಿ ಉಪನ್ಯಾಸಕ ಡಾ. ರಾಜ್ ಎ.ಸಿ, ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರಾದ ಡಾ. ವಿದ್ಯಾಶ್ರೀ ಕೃಷ್ಣ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ತಂಬಾಕಿನ ದುಷ್ಟರಿಣಾಮ ಕುರಿತು ಪ್ರಹಸನ ಹಾಗೂ Slide show ಕಾರ್ಯಕ್ರವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು, ಸ್ನೇಹ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಶಿಕ್ಷಕಿ ದಿವ್ಯಾ ಸ್ವಾಗತಿಸಿ ಶ್ರೀಮತಿ ಜಯಂತಿ ಕೆ. ವಂದಿಸಿದರು. ಶಿಕ್ಷಕಿ ಪವಿತ್ರಾ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.