ನವದೆಹಲಿ: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿಯ ದಿವ್ಯಾಂಗರನ್ನು ಗುರುತಿಸಿ ಯುನಿವರ್ಸಲ್ ಐಡೆಂಟಿಟಿ ಕಾರ್ಡ್ (ಯುಐಸಿ) ಗಳನ್ನು ವಿತರಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಪ್ರಾಥಮಿಕ ಹಂತದಲ್ಲಿ ಅಹ್ಮದಾಬಾದ್ನ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡಿಸೈನ್ನಲ್ಲಿ ಕಾರ್ಡ್ಗಳನ್ನು ತಯಾರಿಸಲಾಗಿದೆ. ಶೀಘ್ರದಲ್ಲೇ ಕಾರ್ಡ್ಗಳನ್ನು ಎಲ್ಲಾ ರಾಜ್ಯಗಳಿಗೆ ಹಂಚಲಾಗುವುದು. ರಾಜ್ಯ ಸರ್ಕಾರಗಳು ತಮ್ಮ ರಾಜ್ಯದ ವಿಕಲಚೇತನರನ್ನು ಗುರುತಿಸಿ ಕಾರ್ಡ್ಗಳನ್ನು ವಿತರಿಸಬೇಕು. ಮುಂದಿನ ಒಂದೂವರೆ ವರ್ಷದಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಕಲ್ಯಾಣ ಸಚಿವ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಈ ಕಾರ್ಯದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಆಧಾರ್ ಕಾರ್ಡ್ ಜೊತೆ ಯುಐಸಿಯನ್ನು ಲಿಂಕ್ ಮಾಡಲಾಗುವುದು. ಈ ಮೂಲಕ ಕೇಂದ್ರ ಸರ್ಕಾರ ಪ್ರತಿ ಅರ್ಹ ವಿದ್ಯಾರ್ಥಿ ವಿದ್ಯಾರ್ಥಿವೇತನದ ಲಾಭ ಪಡೆಯುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಚಾರ ಕಾರ್ಯ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೋರಲಾಗಿದ್ದು, ವಿದ್ಯಾರ್ಥಿವೇತನ ವಿತರಣೆಯಲ್ಲಿ ವಿಳಂಬ ಮತ್ತು ಸೋರಿಕೆಯನ್ನು ತಪ್ಪಿಸಲು ನೇರ ಲಾಭ ವರ್ಗಾವಣೆ ( direct benefit transfer) ಅಳವಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.