ನವದೆಹಲಿ: ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿ, ಮುಂದಿನ ಚುನಾವಣೆಗೆ ಪ್ರಧಾನಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಲಿರುವ ಹಿನ್ನೆಲೆಯಲ್ಲಿ ಬಾಲಿವುಡ್ ಹಿರಿಯ ನಟ ಓಂಪುರಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಪ್ರಧಾನಿಯಾಗುತ್ತಾರೆ ಎಂದು ಸೋನಿಯಾ ಕನಸು ಕಾಣುತ್ತಿದ್ದಾರೆ. ಆದರೆ ಈ ದೇಶದ ಜನರು ಮೂರ್ಖರಲ್ಲ. ರಾಹುಲ್ ಗಾಂಧಿಯ ವಯಸ್ಸು, ಅನುಭವ, ಅವರು ಏನು ಮಾತನಾಡುತ್ತಾರೆಂದು ಕೇಳಿದ್ದೀರಾ ? ಜನರೇನು ಮೂರ್ಖರೇ ಅವರನ್ನು ಪ್ರಧಾನಿಯನ್ನಾಗಿ ಆರಿಸಲು ಎಂದು ಓಂಪುರಿ ಹೇಳಿದ್ದಾರೆ.
ತಮ್ಮ ಚಿತ್ರ ಮರಾಠವಾಡ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರು, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ, ಮುಂದಿನ ಸಲವೂ ಮೋದಿಗೇ ಜನರು ಮತ ಹಾಕುತ್ತಾರೆ. ಮೋದಿಯವರು ಜನರನ್ನು ಅರಿತ ನಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಈ ಕಾರ್ಯವನ್ನು ಮಾಡುತ್ತಿಲ್ಲ. ರಾಜಕಾರಣದ ಅನುಭವ ಇರುವವರನ್ನು ಅಭ್ಯರ್ಥಿ ಮಾಡದೆ ಸೋನಿಯಾ ಗಾಂಧಿ ತಮ್ಮ ಮಗನನ್ನು ಪ್ರಧಾನಿಯನ್ನಾಗಿ ಮಾಡಲು ಹೊರಟಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಓಂಪುರಿಯವರಿಗೆ ಬಿಜೆಪಿ ಪಕ್ಷಕ್ಕೆ ಸೇರುವ ಯೋಚನೆಗಳಿವೆಯೇ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.