ಮಂಗಳೂರು : ಕೇಂದ್ರ ಸರಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಜಿಜೆಪಿ ವಿಕಾಸ ಪರ್ವ ಕಾರ್ಯಕ್ರಮವು ಜೂನ್ 8 ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನರೇಂದ್ರ ಮೋದಿಯವರ ನೇತೃತ್ವದ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸಿದ್ದು, ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿ ದೇಶವನ್ನು ಪರಮೋಚ್ಛ ಸ್ಥಾನಕ್ಕೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲಿ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್ ಸಮಾವೇಶ ವಿಕಾಸ ಪರ್ವವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ.
ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯ ಮತ್ತು ಯೋಜನೆಗಳು ಜನರನ್ನು ತಲುಪಿರುವ ಬಗ್ಗೆ ಮತ್ತು ಸಾಧನೆಗಳ ಮಾಹಿತಿ ನೀಡಿ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಲಿದ್ದಾರೆ.
ಕಾರ್ಯಕಮ್ರದಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಹರಿಭಾಯಿ ಪಿ. ಚೌಧರಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಸ್ಸಿ ಮೋರ್ಚಾದ ಮಾಜಿ ರಾಷ್ಟ್ರೀಯ ಅಧ್ಯಕ್ಷ ದುಶ್ಯಂತ್ ಕುಮಾರ್ ಗೌತಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ವಹಿಸಲಿದ್ದು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾಷ್ಟನ್ ಗಣೇಶ್ ಕಾರ್ಣಿಕ್, ಸುಳ್ಯ ಶಾಸಕ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಜಿಲ್ಲಾ ಮಾಜಿ ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.