ಮಂಗಳೂರು : ಪತ್ರಿಕಾಗೋಷ್ಠಿಗಳನ್ನು ನಡೆಸುವುದರಲ್ಲಿ ಪ್ರಸಿದ್ಧರಾದ ಕಾಂಗ್ರೆಸ್ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ `ನೀವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದೀರಾ’ ಎಂದು ಕೇಳಿದ್ದಾರೆ.
ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳೇ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಮಾಡಲು ಹೊರಟಿದ್ದಾರೆ. ಇದರಿಂದ ನರೇಂದ್ರ ಮೋದಿಗೂ ಸಿದ್ದರಾಮಯ್ಯನವರಿಗೂ ಏನು ವ್ಯತ್ಯಾಸವೆಂದು ಮಾಜೀ ಕೇಂದ್ರ ಸಚಿವ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಸಿದ್ದರಾಮಯ್ಯನವರ ಕಾರ್ಯಪದ್ಧತಿ ಮತ್ತು ಆಡಳಿತ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಮುಂದಾಗಿದೆ. ಮುಖ್ಯಮಂತ್ರಿಗಳು ಸರಕಾರಿ ನೌಕರರ ವಿರುದ್ಧ ಎಸ್ಮಾ ಕಾಯಿದೆ ಜಾರಿ ಮಾಡಬಾರದಿತ್ತು. ಇದರ ಬದಲು ಅವರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದಿತ್ತು . ಅದನ್ನು ಬಿಟ್ಟು ಎಸ್ಮಾ ಕಾಯಿದೆ ಪ್ರಯೋಗ ಮಾಡಿ ಜನತೆಗೆ ದ್ರೋಹವೆಸಗಿದಂತಾಗಿದೆ.
ಮೋದಿಯವರು ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡ ಹೊರಟಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದು, ಮೋದಿಯವರು ಏನೇ ಮಾಡಿದರೂ ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡಲು ಆಗುವುದಿಲ್ಲ. ಆದರೆ ಇದೀಗ ಸಿದ್ದರಾಮಯ್ಯನವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದು, ಅವರೇನೇ ಮಾಡಿದರೂ ರಾಜ್ಯದಲ್ಲಿ ಕಾಂಗ್ರೇಸ್ ಮುಕ್ತವಾಗಲು ಕಾರ್ಯಕರ್ತರು ಬಿಡುವುದಿಲ್ಲ ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ಗುಡುಗಿದ್ದಾರೆ.
ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರ ವಿರುದ್ದ ಹಲವು ಬಾರಿ ಹರಿಹಾಯಿದಿದ್ದು ಇದರಿಂದ ಸರಕಾರ ಮತ್ತು ಪಕ್ಷ ಮುಜುಗುರಪಡುವಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.