ನವದೆಹಲಿ: ಮುಂಬರುವ ದಿನಗಳಲ್ಲಿ ಅಫ್ಘಾನಿಸ್ತಾನದ ದೇಶೀಯ ಕ್ರಿಕೆಟ್ ಪಂದ್ಯಗಳನ್ನು ಭಾರತದಲ್ಲಿ ಆಯೋಜನೆ ಮಾಡುವ ಸಾಧ್ಯತೆ ಇದೆ. ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರು ಮುಂದಿನ ವಾರ ಭಾರತಕ್ಕೆ ಬರಲಿದ್ದು, ಆ ವೇಳೆ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
‘ತನ್ನ ನೆಲದಲ್ಲಿ ಭಾರತ ನಮಗೆ ಕ್ರಿಕೆಟ್ ಆಡಲು ಅವಕಾಶ ನೀಡಿದರೆ ನಮ್ಮ ಆಟಗಾರರಿಗೆ ನಿಜಕ್ಕೂ ಬಹಳಷ್ಟು ಸಹಾಯಕವಾಗುತ್ತದೆ. ನಮ್ಮಲ್ಲಿ ಒಳ್ಳೆಯ ಆಟಗಾರರಿದ್ದಾರೆ, ಅವರಿಗೆ ಸೌಲಭ್ಯ ಮತ್ತು ಪ್ರಚಾರದ ಅಗತ್ಯವಿದೆ, ಕಿರಿಯರು ಆಡಿದರೆ ಅವರ ಸಾಮರ್ಥ್ಯ ಇತರರಿಗೆ ಗೊತ್ತಾಗಿ ಅವರು ಐಪಿಎಲ್ನಂತಹ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಬಿಸಿಸಿಐ ನಮಗೆ ಸಹಾಯ ಮಾಡುತ್ತದೆ ಎಂದು ಅಂದುಕೊಂಡಿದ್ದೇವೆ’ ಎಂದು ಅಫ್ಘಾನ್ ಕ್ರಿಕೆಟ್ ಮ್ಯಾನೇಜರ್ ಬಶೀರ್ ಸ್ತೆನೆಖಾಝಿ ತಿಳಿಸಿದ್ದಾರೆ.
ಭಯೋತ್ಪಾದಕರ ಭೀತಿಯಿಂದಾಗಿ ಅಫ್ಘಾನಿಸ್ತಾನಕ್ಕೆ ತನ್ನ ದೇಶದಲ್ಲಿ ಕ್ರಿಕೆಟ್ ಪಂದ್ಯಾಟಗಳನ್ನು ಆಯೋಜನೆ ಮಾಡುವುದು ಸುಲಭದ ಮಾತಲ್ಲ. ಹೀಗಾಗಿ ಅದು ಇತರ ದೇಶಗಳನ್ನು ಅವಲಂಭಿಸುವುದು ಅನಿವಾರ್ಯ.
ಪ್ರಸ್ತುತ ಅಫ್ಘಾನಿಸ್ತಾನದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೈಟ್ಸ್ನಲ್ಲಿ ನಡೆಯುತ್ತಿದೆ. ಹೀಗಿದ್ದರೂ ಈ ಬಾರಿಯ ವಿಶ್ವಕಪ್ನಲ್ಲಿ ಅಫ್ಘಾನ್ ಆಟಗಾರರು ಅಮೋಘ ಪ್ರದರ್ಶನವನ್ನೇ ನೀಡಿದ್ದಾರೆ. ಇದರಿಂದಾಗಿ ಕ್ರಿಕೆಟನ್ನು ಮತ್ತಷ್ಟು ಬೆಳೆಸಬೇಕು ಎಂಬ ಉತ್ಸಾಹ ಆ ದೇಶಕ್ಕೆ ಮೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.