ಪುದುಚೇರಿ: ಮಾಜಿ ಕೇಂದ್ರ ಸಚಿವ ವಿ ನಾರಾಯಣಸ್ವಾಮಿ ಅವರು ಸೋಮವಾರ ಪುದುಚೇರಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ನಾರಾಯಣಸ್ವಾಮಿ ಅವರೊಂದಿಗೆ ಇತರ ಐವರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೀಚ್ ರೋಡ್ನ ಐತಿಹಾಸಿಕ ಗಾಂಧಿ ತಡಲ್ನಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಮಾಣವಚನ ಮತ್ತು ಗುಪ್ತಪ್ರತಿಜ್ಞೆಯನ್ನು ಬೋಧನೆ ಮಾಡಿದರು.
ಯುಪಿಎ ಮೊದಲ ಅವಧಿಯಲ್ಲಿ ಸಂದೀಯ ಸಚಿವರಾಗಿದ್ದ ನಾರಾಯಣ ಸ್ವಾಮಿ, ಯುಪಿಎ-2ನಲ್ಲಿ ರಾಜ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
30 ಸದಸ್ಯ ಬಲವುಳ್ಳ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಯ 17 ಸದಸ್ಯರು ಸರ್ಕಾರ ರಚನೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.