ನವದೆಹಲಿ; ಹಲವು ಸಮಯಗಳ ಬಳಿಕ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.
ಉತ್ತರಪ್ರದೇಶದಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಅವರು, ನಾವು ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸುತ್ತೇವೆ ಮತ್ತು ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ ಎಂದಿದ್ದಾರೆ.
ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದ ರೀತಿಯಲ್ಲಿ ಮಂದಿರವನ್ನು ನಿರ್ಮಿಸುವುದು ನಮ್ಮ ಗುರಿ ಎಂದಿದ್ದಾರೆ.
2017 ರಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ, ಇದರಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಷಾ ಅವರು ರಾಮಮಂದಿರ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.