ನವದೆಹಲಿ: ಎಎಪಿಯ ರೈತ ಸಮಾವೇಶದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ.
ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲದೇ ಎಎಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರೂ ಎಎಪಿ ವಿರುದ್ಧ ಬೃಹತ್ ಪ್ರತಿಭಟನೆಯನ್ನೇ ನಡೆಸುತ್ತಿದ್ದಾರೆ. ಇದೊಂದು ಯೋಜಿತ ಕೊಲೆಯಾಗಿದ್ದು, ಎಎಪಿ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು ಎಂದು ದೆಹಲಿ ಬಿಜೆಪಿ ಘಟಕ ಆಗ್ರಹಿಸಿದೆ.
ಘಟನೆಯ ಬಗ್ಗೆ ಗೃಹಸಚಿವ ರಾಜನಾಥ್ ಸಿಂಗ್ ಇಂದು ಸಂಸತ್ತಿನಲ್ಲಿ ಹೇಳಿಕೆ ನೀಡುವ ಸಾಧ್ಯತೆ ಇದೆ.
ರೈತನ ಆತ್ಮಹತ್ಯೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇದರಲ್ಲಿ ಹಿರಿಯ ಸಚಿವರುಗಳಾದ ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೃತ ರೈತ ಗಜೇಂದ್ರ ಸಿಂಗ್ ಅವರ ಬೆಳೆಗಳು ಅಷ್ಟೊಂದು ಪ್ರಮಾಣದಲ್ಲಿ ಹಾನಿಯಾಗಿರಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳುವಂತಹ ಕಷ್ಟ ಅವರಿಗೆ ಇರಲಿಲ್ಲ. ಸಮಾವೇಶಕ್ಕೆ ಅವರು ಖುಷಿಯಿಂದಲೇ ತೆರಳಿದ್ದರು ಎಂದು ರೈತನ ಕುಟುಂಬವರ್ಗ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.