ನವದೆಹಲಿ: ಸಚಿವ ಪ್ರಕಾಶ್ ಜಾವ್ಡೇಕರ್ ಅವರ ನೇತೃತ್ವದ ಪರಿಸರ ಮತ್ತು ಅರಣ್ಯ ಸಚಿವಾಲಯದ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಮೆನಕಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಲ್ಲಾ ರಾಜ್ಯಗಳಲ್ಲಿ ಪ್ರಾಣಿಗಳನ್ನು ಹತ್ಯೆ ಮಾಡಲಾಗುತ್ತಿದೆ, ಆದರೂ ಪರಿಸರ ಸಚಿವಾಲಯ ಮೌನವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪಶ್ಚಿಮಬಂಗಾಳದಲ್ಲಿ ಆನೆಗಳನ್ನು, ಹಿಮಾಚಲ ಪ್ರದೇಶದಲ್ಲಿ ಮಂಗಗಳನ್ನು, ಗೋವಾದಲ್ಲಿ ನವಿಲುಗಳನ್ನು ಕೊಲ್ಲಲು ಅರಣ್ಯ ಸಚಿವಾಲಯ ಆದೇಶಿಸುತ್ತಿದೆ, ಮಹಾರಾಷ್ಟ್ರದ ಚಂದ್ರಪುರದಲ್ಲಿ ಸ್ಥಿತಿ ತುಂಬಾ ಕೆಟ್ಟದಾಗಿದೆ, ಅಲ್ಲಿ 53 ಕಾಡು ಕರಡಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರಾಣಿಗಳನ್ನು ಹತ್ಯೆ ಮಾಡುವುದಕ್ಕೆ ಯಾಕೆ ಇಷ್ಟೊಂದು ಉತ್ಸಾಹ, ಪರಿಸರ ಸಚಿವಾಲಯ ಇರುವುದು ಪ್ರಾಣಿಗಳ ವಧೆಗಾಗಿಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿರುವ ಜಾವ್ಡೇಕರ್, ಪ್ರಾಣಿಗಳಿಂದ ರೈತರ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ರಾಜ್ಯಗಳು ಪತ್ರ ಬರೆದಾಗ ಪ್ರಾಣಿಗಳ ಹತ್ಯೆಗೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.