ಬೆಂಗಳೂರು: ಸರ್ಕಾರದ ಲಿಕ್ಕರ್ ದಂಧೆಗೆ ಬೇಸತ್ತು ರಾಜೀನಾಮೆ ನೀಡಿರುವ ಕೂಡ್ಲಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ಗುರುವಾರ ಕೂಡ್ಲಿಗಿಗೆ ತೆರಳಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆಯನ್ನು ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ.
ಕೆಲದಿನಗಳಿಂದ ಅಜ್ಞಾತವಾಸದಲ್ಲಿದ್ದ ಅನುಪಮಾ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿದ್ದರು. ಆದರೆ ಅವರ ಫೇಸ್ಬುಕ್ ಸ್ಟೇಟಸ್ ಅವರೇ ಅಪ್ಡೇಟ್ ಮಾಡುತ್ತಿದ್ದರೇ ಅಥವಾ ಹ್ಯಾಕ್ ಆಗಿದೆಯೇ ಎಂಬುದು ಇನ್ನೂ ನಿಗೂಢವಾಗಿದೆ.
ಬುಧವಾರ ಮಾಧ್ಯಮಗಳ ಮುಂದೆ ಅವರು ಕಾಣಿಸಿಕೊಂಡಿದ್ದು, ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.
ಕೂಡ್ಲಗಿಗೆ ಇಂದು ತನ್ನ ಸಹೋದರನ ಜೊತೆ ತೆರಳಿರುವ ಅವರು ಅಲ್ಲೇ ಅತಿಥಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ. ಸಂಜೆ ಅವರು ಬಳ್ಳಾರಿ ಎಸ್ಪಿ ಆರ್.ಚೇತನ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ ಅವರು ಪಿ.ಟಿ.ಪರಮೇಶ್ವರ್ ನಾಯ್ಕ್ಗೆ ಸಂಬಂಧಿಸಿದ ಸಿಡಿಯನ್ನು ಬಹಿರಂಗಪಡಿಸುವುದಾಗಿ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.