ಬೆಂಗಳೂರು: ಎ.29 ಮತ್ತು 30ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ.
ಮೇ 30ರಂದು ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಆಗಮಿಸಲು ತೊಂದರೆಯಾಗಬಹುದೆಂಬ ಕಾರಣಕ್ಕಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮುಷ್ಕರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಇತರ ಸಾರಿಗೆ ನೌಕರರ ಸಂಘಟನೆಗಳು ಬೆಂಬಲ ಸೂಚಿಸಿದೆ. ಹೀಗಾಗೀ ಎ.30ರಂದು ರಾಜ್ಯದಲ್ಲಿ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕೀಡಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಹೆಚ್ಚಿನ ವಿವರಗಳಿಗಾಗಿ ಕೆಇಎ ವೆಬ್ಸೈಟ್ http://www.kea.kar.nic.in ನ್ನು ವೀಕ್ಷಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.