ನವದೆಹಲಿ: ಹಿಂದೂ ಮಹಾಸಾಗರ ಮತ್ತು ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿ ತನ್ನ ಅಸ್ತಿತ್ವವನ್ನು ವೃದ್ಧಿಸಿಕೊಳ್ಳಲು ಭಾರತ ಪ್ರಯತ್ನಿಸುತ್ತಿರುವಂತೆ ಭಾರತದ ವಿರುದ್ಧ ಕುತಂತ್ರ ಹೆಣೆಯಲು ಚೀನಾ ಹವಣಿಸುತ್ತಿದೆ.
ಭಾರತದ ಹೆಮ್ಮೆಯ ಐಎನ್ಎಸ್ ವಿಕ್ರಾಂತ್ ಮತ್ತು ಐಎನ್ಎಸ್ ವಿಕ್ರಮಾದಿತ್ಯದ ಮೇಲೆ ಚೀನಾದ ಹ್ಯಾಕರ್ ತಜ್ಞರು ಕಣ್ಣಿಟ್ಟಿದ್ದಾರೆ ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.
ದಕ್ಷಿಣ ಚೀನಾ ಸಮುದ್ರದಲ್ಲಿ ಈ ಎರಡು ಸಮರ ನೌಕೆಗಳ ಚಲನ ವಲನಗಳನ್ನು ಸೂಕ್ಷ್ಮವಾಗಿ ಚೀನಾದ ಹ್ಯಾಕರ್ಗಳು ಗಮನಿಸುತ್ತಿದ್ದಾರೆ. ಸೈಬರ್ ಸೆಕ್ಯೂರಿಟಿ ಕೋಡ್ಗಳನ್ನು ಪತ್ತೆ ಹಚ್ಚಿ ಭಾರತಕ್ಕೆ ಸಂಬಂಧಿಸಿದ ಅತ್ಯಂತ ಮಹತ್ವದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಟಿಬೆಟ್ನಿಂದ ವಲಸೆ ಬಂದು ಭಾರತದಲ್ಲಿ ನೆಲೆಸಿರುವವರನ್ನೂ ಚೀನಾ ಮೂಲದ ಹ್ಯಾಕರ್ಗಳು ಗುರಿಯಾಗಿರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.