ನವದೆಹಲಿ: ದೇಶವನ್ನು ಡಿಜಟಲೀಕರಣಗೊಳಿಸುವ ಮಹತ್ವಾಕಾಂಕ್ಷೆಯನ್ನು ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಈ ಯೋಜನೆಯನ್ನು ಕೆಲ ರಾಜ್ಯಗಳು ಯಶಸ್ವಿಯಾಗಿ ಜಾರಿಗೊಳಿಸಿದರೆ, ಕೆಲ ರಾಜ್ಯಗಳು ಯೋಜನೆ ಜಾರಿಯಲ್ಲಿ ಹಿಂದೆ ಬಿದ್ದಿವೆ.
ಜಾರ್ಖಾಂಡ್ ರಾಜ್ಯ ಇಡೀ ದೇಶದಲ್ಲೇ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ ಅತೀ ಹೆಚ್ಚು ಸಾಧನೆ ಮಾಡಿದ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ ನಂಬರ್ 1 ಸ್ಥಾನದಲ್ಲಿರುವ ಜಾರ್ಖಾಂಡ್ಗೆ ಗುರುವಾರ ಗೋವಾ ಮುಖ್ಯಮಂತ್ರಿಯವರು ಪ್ರಶಸ್ತಿಯನ್ನು ಹಸ್ತಾಂತರ ಮಾಡಿದರು.
ಮುಂಬಯಿಯಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಾಂಡ್ ಮಾತ್ರವಲ್ಲದೇ, ಮಹಾರಾಷ್ಟ್ರ, ಗೋವಾ, ಮಜೋರಾಂ, ಉತ್ತರಪ್ರದೇಶ, ಹಿಮಾಚಲ ಪ್ರದೇಶಗಳಿಗೂ ಪ್ರಶಸ್ತಿಯನ್ನು ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.