ನವದೆಹಲಿ : ರಾಷ್ಟ್ರೀಯ ಸುದ್ಧಿವಾಹಿನಿಗಳಿಂದ ನಡೆದ ಕುಟುಕು ಕಾರ್ಯಾಚರಣೆಯಲ್ಲಿ ಹಣಕ್ಕಾಗಿ ಮತ ಮಾರಾಟಕ್ಕೆ ಮುಂದಾಗಿ ತೀವ್ರ ಚರ್ಚೆಗೆ ಗುರಿಯಾಗಿದ್ದ ಶಾಸಕರಲ್ಲೋಬ್ಬರಾದ ಮಲ್ಲಿಕಾರ್ಜುನ ಖುಬಾ ವಿರುದ್ಧ ಸಿಬಿಐ ತನಿಖೆ ನಡೆಸಿ ಎಫ್ ಐ ಆರ್ ದಾಖಲಿಸುವಂತೆ ಕೇಂದ್ರ ಚನಾವಣಾ ಆಯೋಗ ಆದೇಶಿಸಿದ್ದು, ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಲಾಗಿಲ್ಲ.
ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದ್ದು, ಐದು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಕಾಂಗ್ರೇಸ್ ನಿಂದ 3, ಬಿಜೆಪಿಯಿಂದ 1 ಮತ್ತು ಜೆಡಿಎಸ್ ನಿಂದ ಒಬ್ಬರು ಕಣಕ್ಕಿಳಿದ್ದು , ಶನಿವಾರ ಚುನಾವಣೆ ನಡೆಯಲಿದೆ. ಪ್ರಸ್ತುತ ಇರುವ ಸದಸ್ಯರ ಅವಧಿ ಜೂ.30 ಕ್ಕೆ ಮುಕ್ತಾಯಗೊಳ್ಳಲಿದೆ.
ಕಾಂಗ್ರೆಸ್ ನಿಂದ ಆಸ್ಕರ್ ಫರ್ನಾಂಡೀಸ್, ಜೈರಾಮ್ ರಮೇಶ್, ರಾಮಮೂರ್ತಿ, ಬಿಜೆಪಿಯಿಂದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಜೆಡಿಎಸ್ ನಿಂದ ಬಿಎಂ ಫಾರೂಕ್ ರಾಜ್ಯಸಭೆಗೆ ಸ್ಪರ್ಧಿಸಿದ್ದಾರೆ
ಈ ಚುನಾವಣೆ ಕುತೂಹಲ ಸೃಷ್ಟಿಸಿದ್ದು , ಯಾರು ಗೆಲ್ಲಲಿದ್ದಾರೆ ಎಂದು ಕಾದುನೋಡಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.