ನವದೆಹಲಿ: ಭಾರತದಲ್ಲಿ ಶಿಕ್ಷಣಕ್ಕೆ ನೀಡುತ್ತಿರುವ ಪ್ರಾಮುಖ್ಯತೆ ಕಳೆದ ಕೆಲ ವರ್ಷಗಳಿಂದ ಗಣನೀಯವಾಗಿ ಹೆಚ್ಚಾಗುತ್ತಾ ಬರುತ್ತಿದೆ. 2001 ಮತ್ತು 2011ರ ನಡುವೆ 5 ರಿಂದ 19ರ ವಯಸ್ಸಿನ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಧರ್ಮಗಳ ಅನುಸಾರ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಸಂಖ್ಯೆಯನ್ನು ಲೆಕ್ಕ ಹಾಕಲಾಗಿದೆ.
ಮುಸ್ಲಿಂ ವಿದ್ಯಾರ್ಥಿಗಳ ಒಟ್ಟು ಸಂಖ್ಯೆಯಲ್ಲಿ ಶೇ.44ರಷ್ಟು ಏರಿಕೆಯಾಗಿದೆ, ಇದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆ ಶೇ.55ರಷ್ಟು ಜಿಗಿತ ಕಂಡಿರುವುದು ಸಕಾರಾತ್ಮಕ ಬೆಳವಣಿಗೆ.
ಪ್ರಸ್ತುತ 5-19 ವರ್ಷದ ಪ್ರಾಯದ ಮುಸ್ಲಿಂ ಮಕ್ಕಳ ಪೈಕಿ ಶೇ.63ರಷ್ಟು ಮಂದಿ ವಿದ್ಯಾರ್ಥಿಗಳು. ಶಿಕ್ಷಣದಲ್ಲಿ ಹಿಂದೆ ಬಿದ್ದಿದ್ದ ಮುಸ್ಲಿಮರು ಈಗ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂಬುದು ಇದರಿಂದ ತಿಳಿದು ಬರುತ್ತಿದೆ.
5ರಿಂದ 19 ವಯಸ್ಸಿನ ಹಿಂದೂ ವಿದ್ಯಾರ್ಥಿಗಳ ಸಂಖ್ಯೆ ಶೇ.73ಕ್ಕಿಂತಲೂ ಹೆಚ್ಚಿದೆ. ಜೈನರು ಉನ್ನತ ಸ್ಥಾನದಲ್ಲಿದ್ದು, ಇವರಲ್ಲಿ ಶೇ.88ರಷ್ಟು ಮಕ್ಕಳು ವಿದ್ಯಾರ್ಥಿಗಳಾಗಿದ್ದಾರೆ. ಎರಡನೇ ಸ್ಥಾನ ಕ್ರಿಶ್ಚಿಯನ್ನರದ್ದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.