ನವದೆಹಲಿ: ಭಾರತದ ಚಾಂಪಿಯನ್ ಶೂಟರ್ ಅಭಿನವ್ ಬಿಂದ್ರಾ 2016ರ ರಿಯೋ ಒಲಿಂಪಿಕ್ಸ್ ಬಳಿಕ ನಿವೃತ್ತಿಯನ್ನು ಪಡೆಯಲು ನಿರ್ಧರಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಏಕೈಕ ಕ್ರೀಡಾಪಟುವಾಗಿರುವ ಬಿಂದ್ರಾ ಈ ಬಾರಿಯ ಒಲಿಂಪಿಕ್ಸ್ ಉದ್ಘಾಟನೆಯ ವೇಳೆ ಭಾರತದ ಧ್ವಜವನ್ನು ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.
2008ರ ಬೀಜಿಂಗ್ ಒಲಿಂಪಿಕ್ನಲ್ಲಿ ಬಿಂದ್ರಾ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದರು. ಇದೀಗ ಅವರು ತಮ್ಮ 20 ವರ್ಷಗಳ ಸುಧೀರ್ಘ ಕ್ರೀಡಾ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.
ಇದೇ ಆಗಸ್ಟ್ 8 ರಂದು ನನ್ನ 20 ವರ್ಷಗಳ ಶೂಟಿಂಗ್ ಜೀವನಕ್ಕೆ ಅಂತ್ಯ ಹಾಡುತ್ತೇನೆ ಎಂದು ಬಿಂದ್ರಾ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.