ಅಲಹಾಬಾದ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ನೇತೃತ್ವದಲ್ಲಿ ಉತ್ತರಪ್ರದೇಶದ ಅಲಹಾಬಾದ್ನಲ್ಲಿ ಭಾನುವಾರದಿಂದ ನಡೆಯುತ್ತಿದೆ. ಮೋದಿಯ ’ಮಿಶನ್ 2019’ ಬಗ್ಗೆ ಚರ್ಚೆ ನಡೆದಿದೆ.
ಈ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೇ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಇತರ 4 ರಾಜ್ಯಗಳಾದ ಗೋವಾ, ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ ಚುನಾವಣೆಯ ಬಗ್ಗೆಯೂ ಚರ್ಚಿಸಲಾಗುತ್ತಿದೆ.
ಎರಡನೇ ದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ಸಚಿವ ಸಂಪುಟ ಸದಸ್ಯರು, ಸಂಸದರು, ಇತರ ಹಿರಿಯ ನಾಯಕರು, ಬಿಜೆಪಿ ಸಿಎಂಗಳು ಕಾರ್ಯಕಾರಿಣಿಯಲ್ಲಿ ಭಾಗವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.