ನವದೆಹಲಿ: ಭಾರತದ ಪ್ರಧಾನಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್ ಅವರ ಜೀವನಾಧಾರಿತ ಸಿನಿಮಾವೊಂದು ಶೀಘ್ರದಲ್ಲೇ ಬೆಳ್ಳಿ ತೆರೆಗೆ ಅಪ್ಪಳಿಸಲಿದೆ.
ಸಂಜಯ್ ಬರು ಅವರು ಸಿಂಗ್ ಅವರ ಬಗ್ಗೆ ಬರೆದ ವಿವಾದಾತ್ಮಕ ’ಅಕ್ಸಿಡೆಂಟಲ್ ಪ್ರೈಮಿನಿಸ್ಟರ್: ದಿ ಮೇಕಿಂಗ್ ಆಂಡ್ ಅನ್ ಮೇಕಿಂಗ್ ಆಫ್ ಮನಮೋಹನ್ ಸಿಂಗ್’ ಪುಸ್ತಕವನ್ನು ಆಧರಿಸಿ ಸಿನಿಮಾ ತಯಾರಾಗಲಿದೆ.
ಸಿಂಗ್ ಅವರು ಪ್ರಧಾನಿ ಕಛೇರಿಯಲ್ಲಿ ಕಳೆದ ಸಮಯಗಳ ಮೇಲೆಯೇ ಈ ಚಿತ್ರ ಹೆಚ್ಚು ಬೆಳಕು ಚೆಲ್ಲಲಿದೆ. ಸುನೀಲ್ ಬೊಹ್ರಾ ಇದನ್ನು ನಿರ್ಮಿಸಲಿದ್ದಾರೆ. ಆಗಸ್ಟ್ಗೆ ಟೀಸರ್ ಬಿಡುಗಡೆಯಾಗಲಿದ್ದು, 2017 ರಲ್ಲಿ ತೆರೆ ಕಾಣಲಿದೆ.
ಈ ಸಿನಿಮಾ ಕಾಂಗ್ರೆಸ್ಗೆ ಮುಜುಗರವನ್ನುಂಟು ಮಾಡಲಿದೆ ಎಂದೇ ವಿಶ್ಲೇಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.