ನವದೆಹಲಿ: ನಾಗರಿಕ ವಿಮಾನಯಾನ ಹೊಸ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ವಿಮಾನ ದರ, ರೀಫಂಡ್, ವಿಮಾನಗಳ ತೆರಿಗೆ, ವಿಮಾನಗಳ ದುರಸ್ತಿ ಮತ್ತು ನಿರ್ವಹಣೆ ನೀತಿ ಸೇರಿದಂತೆ ಹಲವು ಬದಲಾವಣೆಗಳಿಗೆ ಒಪ್ಪಿಗೆ ಸೂಚಿಸಿದೆ.
ಹೊಸ ನೀತಿಯ ಭಾಗವಾಗಿ ಒಂದು ಗಂಟೆ ಅವಧಿಯ ವಿಮಾನ ಪ್ರಯಾಣಕ್ಕೆ ರೂ. 2,500 ಹಾಗೂ 30 ನಿಮಿಷಗಳ ಅವಧಿಯ ವಿಮಾನ ಪ್ರಯಾಣಕ್ಕೆ 1,200 ರೂ. ನಿಗದಿಪಡಿಸಲಾಗಿದೆ.
ಹೊಸ ನೀತಿಯಿಂದ ವಿಮಾನ ದರಗಳು ಇಳಿಕೆಯಾಗಲಿದ್ದು, ಟಿಕೆಟ್ ರದ್ದುಗೊಳಿಸಿದಲ್ಲಿ ಪ್ರಯಾಣಿಕರಿಗೆ ವಿಧಿಸುವ ಶುಲ್ಕ, ಸರಕು ಶುಲ್ಕದಲ್ಲಿ ಸಡಿಲಿಕೆ ಮಾಡಲಾಗಿದೆ. ವಿಮಾನ ನಿಲ್ದಾಣಗಳ ಅಭಿವೃದ್ಧಿ, ಹೊಸ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ 15,000 ಕೋಟಿ ರೂ. ಹೂಡಿಕೆ ಮತ್ತು ಬೆಳವಣಿಗೆಗೆ ಹೊಸ ನೀತಿ ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.