ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಶಾರದಾ ವಿದ್ಯಾಲಯದಲ್ಲಿ ಶಾಲಾ ’ವಿದ್ಯಾರ್ಥಿಸಂಘ’ವನ್ನು ಯೂನಿಯನ್ ಬ್ಯಾಂಕಿನ ನಿವೃತ್ತ ಚೀಫ್ ಜನರಲ್ ಮೇನೇಜರ್ ಶ್ರೀ. ವಿ.ಎ. ಮೆಂಡೊನ್ಸಾರವರು ಉದ್ಘಾಟಿಸಿ ಮಾತನಾಡುತ್ತಾ ನಮ್ಮ ವ್ಯಕ್ತಿತ್ವ ವಿಕಸನದೊಂದಿಗೆ ನಮ್ಮಲ್ಲಿ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ಬೆಳವಣಿಗೆಯಿಂದ ಮಾತ್ರ ನಮ್ಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಹಾಗೂ ಆತ್ಮ ವಿಶ್ವಾಸ ಕೂಡ ಬೆಳೆಯುತ್ತದೆ ಎಂದರು. ಅದೇ ರೀತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕರು ನಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರೊಂದಿಗೆ ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿಕೊಂಡಾಗಲೇ ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಗಳಾಗಿ ಬದುಕಬಹುದು ಎಂದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಕೆ.ಎಸ್.ಕಲ್ಲೂರಾಯ ಹಾಗೂ ಟ್ರಸ್ಟಿಗಳಾದ ಶ್ರೀ ಪ್ರದೀಪ ಕುಮಾರ ಕಲ್ಕೂರ ಉಪಸ್ಥಿತರಿದ್ದರು. ವಿದ್ಯಾಲಯದ ಉಪ-ಪ್ರಾಂಶುಪಾಲರಾದ ಶ್ರೀ ದಯಾನಂದ ಕಟೀಲ್ರವರು ಸ್ವಾಗತಿಸಿದರೆ, ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ ಮಡಿ ಧನ್ಯವಾದವಿತ್ತರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.