ನವದೆಹಲಿ: ಜೂನ್ 21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ 100 ರಾಷ್ಟ್ರಗಳಲ್ಲಿ ಆರ್ಟ್ ಆಫ್ ಲಿವಿಂಗ್ ಆಚರಿಸಲಿದೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಯೂರೋಪ್ನ ಬ್ರುಸೆಲ್ಸ್ ಸಂಸತ್ತಿನಲ್ಲಿ ಸಂಸತ್ ಸದಸ್ಯರಿಗೆ ಮಾರ್ಗದರ್ಶನ ನೀಡುವ ಮೂಲಕ ಧ್ಯಾನದ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯನ್ನು ಯೆಹುದಿ ಮೆನುಹಿನ್ ಹಾಲ್ನಲ್ಲಿ ಉದ್ಘಾಟಿಸಲಿದ್ದಾರೆ.
ಅವರು ವಾಷಿಂಗ್ಟನ್ ಡಿಸಿ, ಬೋಸ್ಟನ್, ಕೊಲಂಬಸ್, ಮಿನ್ನಸೊಟಾ, ಸ್ಯಾನ್ ಫ್ರಾನ್ಸಿಸ್ಕೋ, ಪೋಲ್ಯಾಂಡ್, ಸಿಯಾಟೆಲ್ ಹಾಗೂ ಯುನೈಟೆಡ್ ಕಿಂಗ್ಡಮ್ನಲ್ಲಿ ಸುದರ್ಶನ ಕ್ರಿಯೆ, ಯೋಗ ಮತ್ತು ಧ್ಯಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 20,000 ಜನರು ಹಾಗೂ ಮಂಬಯಿನ 4 ಸ್ಥಳಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 16,500 ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಸ್ಥೆ ತಿಳಿಸಿದೆ.
ಮುಂಬಯಿಯಲ್ಲಿ ಜೂನ್ 19 ರಂದು ಪೂರ್ವ ಬೋರಿವಲಿಯಲ್ಲಿ, ಜೂನ್ 21 ರಂದು ಬಾಂದ್ರಾದ ಕಾರ್ಟರ್ ರೋಡ್, ಪಶ್ಚಿಮ ಕಂಡಿವಲಿಯ ಪಾಯ್ಸರ್ ಜಿಮ್ಕಾನಾ, ಹಾಗೂ ನವಿ ಮುಂಬಯಿಯ ಸಿಡ್ಕೋ ವಸ್ತು ಪ್ರದರ್ಶನ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.